Banglore

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಹಿಂದಿರುಗಿಸಿದ ರಾಜ್ಯಪಾಲರು

Share

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅಂಕುಶ ಹಾಕುವ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ಹೆಚ್ಚಿನ ಸ್ಪಷ್ಟನೆ ಕೋರಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.‌ ಆ ಮೂಲಕ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಮುಂದಾದ ರಾಜ್ಯ ಸರ್ಕಾರದ ನಡೆಗೆ ಹಿನ್ನಡೆಯಾಗಿದೆ.‌

ಕರ್ನಾಟಕ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ-2025 ಕರಡನ್ನು ಕಳೆದ ವಾರ ರಾಜ್ಯಪಾಲರ ಅಂಕಿತಕ್ಕಾಗಿ ಕಳುಹಿಸಿಕೊಡಲಾಗಿತ್ತು. ಇದೀಗ ರಾಜ್ಯಪಾಲ ಗೆಹ್ಲೋಟ್ ಅವರು ಕರಡು ಸುಗ್ರೀವಾಜ್ಞೆ ಸಂಬಂಧ ಹಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ಕೋರಿ ವಾಪಸ್ ಕಳುಹಿಸಿದ್ದಾರೆ.ಸುಗ್ರೀವಾಜ್ಞೆಯಲ್ಲಿ ಸಾಲಗಾರರನ್ನು ಎಲ್ಲಾ ಸಾಲ ಹಾಗೂ ಬಡ್ಡಿ ಮೊತ್ತದಿಂದ ಮುಕ್ತಗೊಳಿಸುವ ಅಂಶವನ್ನು ಸೇರಿಸಲಾಗಿದೆ. ಜೊತೆಗೆ, ಸಿವಿಲ್ ಕೋರ್ಟ್ಗಳು ಸಾಲಗಾರರ ವಿರುದ್ಧ ಸಾಲ ವಸೂಲಾತಿ ಸಂಬಂಧ ಯಾವುದೇ ವ್ಯಾಜ್ಯಗಳನ್ನು ಕೈಗೆತ್ತಿಕೊಳ್ಳಬಾರದು ಎಂಬ ಅಂಶವನ್ನು ಪ್ರಸ್ತಾಪಿಸಲಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದರೆ ಸಂತ್ರಸ್ತರನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಕರ್ತವ್ಯ.

ಅದರ ಜೊತೆಗೆ ಅಗತ್ಯ ಇರುವ ವ್ಯಕ್ತಿಗೆ ಕಾನೂನಾತ್ಮಕವಾಗಿ ನಿಯಮದಂತೆ ಸಾಲ ನೀಡಿದ ಸಾಲದಾತನನ್ನು ರಕ್ಷಿಸುವುದೂ ಅಗತ್ಯ ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಪಡೆದ ಸಾಲದಿಂದ ಮುಕ್ತಗೊಳಿಸಿದರೆ ಕಾನೂನುಬದ್ಧವಾಗಿ ಸಾಲ ನೀಡಿದ ಸಂಸ್ಥೆಗಳು ಸಮಸ್ಯೆ ಎದುರಿಸುವ ಸಾಧ್ಯತೆ ಇದೆ. ಅವರ ಮುಂದೆ ತಾವು ನೀಡಿರುವ ಸಾಲವನ್ನು ವಸೂಲಿ ಮಾಡುವ ಯಾವುದೇ ಆಯ್ಕೆಗಳಿರದೇ ಕಾನೂನು ಹೋರಾಟಕ್ಕೆ ಅನುವು ಮಾಡಿಕೊಡಲಿದೆ. ಇದು ಸಹಜ ನ್ಯಾಯಕ್ಕೆ ವ್ಯತಿರಿಕ್ತವಾಗುವ ಸಾಧ್ಯತೆ ಇದ್ದು, ಮೂಲಭೂತ ಹಕ್ಕಿನ ಉಲ್ಲಂಘನೆಯಾಗುವ ಸಾಧ್ಯತೆ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ.

Tags:

error: Content is protected !!