ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸದಂತೆ ಬಿಜೆಪಿಯ ರೆಬಲ್ ನಾಯಕರ ತಂಡ ಹೈಕಮಾಂಡ್ ಅವರಿಗೆ ಮನವಿ ಮಾಡಿದೆ.
ದೆಹಲಿಯಲ್ಲಿ ಬಿಜೆಪಿಯ ಬಣ ಬಡಿದಾಟ ಕ್ಲೈಮಾಕ್ಸ್ ಹಂತಕ್ಕೆ ಬಂದಿದೆಯಾ ಎಂಬ ಪ್ರಶ್ನೆ ಮೂಡಿಸುವ ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ, ಕುಮಾರ ಬಂಗಾರಪ್ಪ ಸೇರಿದಂತೆ ಬಿಜೆಪಿಯ ರೆಬಲ್ ನಾಯಕರ ತಂಡ ಹೈಕಮಾಂಡ್ ಅವರನ್ನು ಭೇಟಿಯಾಗಿದೆ. ದೆಹಲಿಯಲ್ಲಿ ಬಿಜೆಪಿಯ ಬಣ ಬಡಿದಾಟ ಕ್ಲೈಮಾಕ್ಸ್ ಹಂತಕ್ಕೆ ಬಂದಿದೆಯಾ ಎಂಬ ಪ್ರಶ್ನೆ ಮೂಡಿಸುವ ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ, ಕುಮಾರ ಬಂಗಾರಪ್ಪ ಸೇರಿದಂತೆ ಬಿಜೆಪಿಯ ರೆಬಲ್ ನಾಯಕರ ತಂಡ ಹೈಕಮಾಂಡ್ ಅವರನ್ನು ಭೇಟಿಯಾಗಿದೆ. ಈ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಹೈಕಮಾಂಡಗೆ ದೂರು ನೀಡಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಬಿ.ವೈ ವಿಜಯೇಂದ್ರ ಅವರನ್ನು ಮುಂದುವರಿಸದಂತೆ ಮನವಿ ಮಾಡಲಾಗಿದೆ.