ಹೈಟೆನ್ಶನ್ ವೈರ್ ಶಾರ್ಟ್ ಸರ್ಕ್ಯೂಟ್ ಆದ ಹಿನ್ನೆಲೆ ತೆಂಗಿನ ಮರ ಹೊತ್ತಿ ಉರಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಮಧುರಖಂಡಿ ಕ್ರಾಸ್ ಬಳಿ ನಡೆದಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಮಧುರಖಂಡಿ ಕ್ರಾಸ್ ಬಳಿ ಹೈಟೆನ್ಶನ್ ವೈರ್ ಶಾರ್ಟ್ ಸರ್ಕ್ಯೂಟ್ ಆದ ಹಿನ್ನೆಲೆ
ಬೆಳಗಿನಜಾವ ತೆಂಗಿನ ಮರ ಬೆಂಕಿ ಹೊತ್ತಿಕೊಂಡು ಉರಿದಿದೆ. ಶಾರ್ಟ್ ಸರ್ಕ್ಯೂಟ್ ಆದರೂ ವಿದ್ಯುತ್ ಪ್ರವಾಹ ಕಡಿತಗೊಳ್ಳದ ಹಿನ್ನೆಲೆ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಘಟನಾ ಸ್ಥಳದಲ್ಲಿ ಜಮಾಯಿಸಿದ ಸುತ್ತಮುತ್ತಲಿನ ತೋಟದ ನಿವಾಸಿಗಳು ವಿದ್ಯುತ್ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ.