ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಇಬ್ಬಡಿ ಮಲ್ಲಾಪುರ ಪಿ ಎಲ್ ಗ್ರಾಮದ ವರ್ಚುಗಲ್ ಕಾಲುವೆ ಬಳಿ ಸವಿತಾ ಕುರಿ (38) ಎಂಬ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ ಮಾಡಿ ಗೋಣಿ ಚೀಲದಲ್ಲಿ ಹಾಕಿ ಕಾಲುವೆ ಬಳಿ ಆಕೆಯನ್ನು ಎಸೆದಿರುವ ಶಂಕೆ ವ್ಯಕ್ತವಾಗಿದೆ. ಭೀಕರವಾಗಿ ಕೊಚ್ಚಿ ಮಹಿಳೆಯನ್ನು ಕೊಚ್ಚಿ ಕೊಲೆಗೈಯ್ಯಲಾಗಿದೆ. ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.