Belagavi

ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಪರ…ಹಿಂದೂ ವಿರೋಧಿ ಬಜೆಟ್ ಮಂಡಿಸಿದೆ….

Share

ರಾಜ್ಯ ಸರ್ಕಾರ ದಲಿತ ವಿರೋಧಿ ಬಜೆಟ್’ನ್ನು ಮಂಡಿಸಿದೆ. ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಪರ ಮತ್ತು ಹಿಂದೂ ವಿರೋಧಿ ಬಜೆಟ್’ನ್ನು ಮಂಡಿಸಿದೆ ಎಂದು ಆರೋಪಿಸಿ ಎಂದು ಬೆಳಗಾವಿಯಲ್ಲಿ ಬಿಜೆಪಿಯ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿ ಬಿಜೆಪಿಯ ವತಿಯಿಂದ ರಾಜ್ಯ ಸರ್ಕಾರದ ಬಜೆಟ್’ನ ವಿರುದ್ಧ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಹಲಗೆ ಬಾರಿಸುತ್ತ ಘೋಷಣೆಗಳನ್ನು ಕೂಗಿ ಪ್ರತಿಭಟಿಸಲಾಯಿತು.

ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ಬಜೆಟನನ್ನು ಮಂಡಿಸಿದೆ. ರೈತರಿಗೆ ಯಾವುದೇ ಯೋಜನೆಗಳನ್ನು ನೀಡದ ಸರ್ಕಾರ ಕೇವಲ ಒಂದೇ ಸಮುದಾಯವನ್ನು ಓಲೈಸುವ ಕೆಲಸವನ್ನು ಮಾಡಿದೆ. ಬಿಜೆಪಿ ಈ ಬಜೆಟ್’ನ್ನು ವಿರೋಧಿಸುತ್ತದೆ ಎಂದು ಬಿಜೆಪಿ ಮಹಿಳಾ ಪ್ರಮುಖರಾದ ಡಾ. ಸೋನಾಲಿ ಸರ್ನೋಬತ್ ಹೇಳಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. 36 ಸಾವಿರ ಕೋಟಿ ಗುತ್ತಿಗೆದಾರರ ಬಾಕಿ ಬಿಲ್ ನೀಡುತ್ತಿಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ನಡೆಯುತ್ತಿರುವ ಸರ್ಕಾರ ಗ್ಯಾರಂಟಿಗಳನ್ನು ಸರಿಯಾಗಿ ನೀಡುತ್ತಿಲ್ಲ. ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೂ ಸಿಎಂ ಸಿದ್ಧರಾಮಯ್ಯ ಗಮನಹರಿಸುತ್ತಿಲ್ಲ. ಸಿದ್ಧರಾಮಯ್ಯನವರ ಸರ್ಕಾರ ತುಷ್ಟಿಕರಣವನ್ನು ಮಾಡಿ ಉಳಿದ ಸಮುದಾಯಗಳ ಮೇಲೆ ಬಜೆಟ್’ನಲ್ಲಿ ಅನ್ಯಾಯ ಮಾಡಿದೆ. ಬರುವಂತಹ ದಿನಗಳಲ್ಲಿ ಜನರು ಈ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದೆ. ಪಾಕಿಸ್ತಾನ ಪರವಾದ ಬಜೆಟ್ ಮಂಡಿಸಿರುವ ಸಿದ್ಧರಾಮಯ್ಯನವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಹೇಳಿದರು.

ಸಿಎಂ ಸಿದ್ಧರಾಮಯ್ಯನವರ ಸರ್ಕಾರ ಸಾಬರ್ ಬಜೆಟ್ ಮಂಡಿಸಿ, ಕೇವಲ ಒಂದೇ ಸಮುದಾಯವನ್ನು ಓಲೈಸಿದೆ. ಸಾಬರ್ ಬಜೆಟ್ ಆದರೂ ಹಿಂದೂಗಳಿಗೆ ಅಥವಾ ಬೆಳಗಾವಿಗೆ ಏನನ್ನು ನೀಡಿಲ್ಲ. ಕೇವಲ ಅಲ್ಪಸಂಖ್ಯಾತರಿಗೆ ಅನುಕೂಲ ಮಾಡಿ ಇನ್ನುಳಿದ ಸಮುದಾಯವನ್ನು ಕಡೆಗಣಿಸಿದ ಬಜೆಟ್’ನ್ನು ರಾಜ್ಯ ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಹೇಳಿದರು.

ರಾಜ್ಯ ಸರ್ಕಾರ ಹಿಂದೂ ವಿರೋಧಿ ಮುಸ್ಲಿಂ ಪರ ಬಜೆಟ್’ನ್ನು ಮಂಡಿಸಿದೆ. ಎಸ್.ಸಿ.ಪಿ.ಟಿ.ಎಸ್.ಪಿ ಹಣದ ದುರ್ಬಳಕೆ ಮಾಡಲಾಗುತ್ತಿದೆ. ಸರ್ಕಾರದ ಖಜಾನೆ ಖಾಲಿಯಾಗಿದ್ದು, ಸ್ವಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಸಿಡಿದೆಳುವ ಪರಿಸ್ಥಿತಿ ಎದುರಾಗಿದೆ. ರೈತರು, ದಲಿತರು, ಹಿಂದುಳಿದವರು ಮತ್ತು ಶೋಷಿತ ಸಮಾಜಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಹೇಳಿದರು.

ಈ ವೇಳೆ ಬಿಜೆಪಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

Tags:

error: Content is protected !!