Belagavi

ನಗರಸೇವಕರ ಕಿರುಕುಳ ಖಂಡಿಸಿ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳಿಂದ ದಿಢೀರ್ ಪ್ರತಿಭಟನೆ!

Share

ಬೆಳಗಾವಿ ಮಹಾನಗರ ಪಾಲಿಕೆಯ ಸದಸ್ಯರಿಂದ ಮಹಾನಗರ ಪಾಲಿಕೆಯ ಅಧಿಕಾರಿಗಳ ಅವಾಚ್ಯ ಶಬ್ದಗಳಿಂದ ನಿಂದಿಸಿ ನೀಡಲಾಗುತ್ತಿರುವ ಕಿರುಕುಳ ಮತ್ತು ಜೀವ ಬೆದರಿಕೆಯನ್ನು ಖಂಡಿಸಿ ಇಂದು ಬೆಳಗಾವಿ ಮಹಾನಗರ ಪಾಲಿಕೆಯ ಸಿಬ್ಬಂದಿಗಳು ಪಾಲಿಕೆ ಕಾರ್ಯಾಲಯದ ಎದುರು ಪ್ರತಿಭಟನೆಯನ್ನು ನಡೆಸಿದರು.

ಇಂದು ಬೆಳಗಾವಿ ಮಹಾನಗರ ಪಾಲಿಕೆಯ ಸದಸ್ಯರಿಂದ ಮಹಾನಗರ ಪಾಲಿಕೆಯ ಅಧಿಕಾರಿಗಳ ಅವಾಚ್ಯ ಶಬ್ದಗಳಿಂದ ನಿಂದಿಸಿ ನೀಡಲಾಗುತ್ತಿರುವ ಕಿರುಕುಳ ಮತ್ತು ಜೀವ ಬೆದರಿಕೆಯನ್ನು ಖಂಡಿಸಿ ಇಂದು ಬೆಳಗಾವಿ ಮಹಾನಗರ ಪಾಲಿಕೆಯ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಾನಗರ ಪಾಲಿಕೆ ಕಾರ್ಯಾಲಯದ ಎದುರು ಮೌನ ಪ್ರತಿಭಟನೆಯನ್ನು ನಡೆಸಿದರು.

ನಗರಸೇವಕ ರಿಯಾಜ್ ಕಿಲ್ಲೆದಾರ ಎಂಬುವವರಿಂದ ಬೆಳಗಾವಿ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಗಳಾದ ಸಂತೋಷ ಹಣಿಶೆಟ್ಟರ್ ಸೇರಿದಂತೆ ಇನ್ನುಳಿದ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಲಾಗುತ್ತಿದೆ. ನಿತ್ಯವೂ ಕಿರುಕುಳ ನೀಡಲಾಗುತ್ತಿದ್ದು, ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಲಾಯಿತು.

ಇನ್ನು ಅಧಿಕಾರಿ ಮಲೀಕ ಗುಂಡಪ್ಪನವರ ಅವರು ಪ್ರತಿದಿನ ಅಧಿಕಾರಿಗಳಿಗೆ ಕಿರುಕುಳವನ್ನು ನೀಡಲಾಗುತ್ತಿದೆ. ಜೀವಬೆದರಿಕೆ ಹಾಕಲಾಗುತ್ತಿದೆ. ಮಹಾಪೌರರು ಮತ್ತು ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಗುವುದು. ಅಧಿಕಾರಿಗಳಿಗೆ ಸೇವೆ ಸಲ್ಲಿಸಲು ಮುಕ್ತ ವಾತಾವರಣ ನಿರ್ಮಿಸಿಕೊಡಬೇಕೆಂದು ಆಗ್ರಹಿಸಿದರು.
ಈ ವೇಳೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ಧರು.

Tags:

error: Content is protected !!