Belagavi

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಿ: ಕರುನಾಡು ರಕ್ಷಣಾ ವೇದಿಕೆ ಆಗ್ರಹ

Share

ಹುಕ್ಕೇರಿ ತಾಲೂಕಿನ ವ್ಯಾಪ್ತಿಯ ಕೆಲ ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದು ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕರುನಾಡ ರಕ್ಷಣಾ ವೇದಿಕೆಯಿಂದ ಬೆಳಗಾವಿಯಲ್ಲಿ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ಹುಕ್ಕೇರಿ ತಾಲೂಕಿನ ಬಸಾಪುರ ಹಗೆದಾಳ ಕಟ್ಟಾ ಬಳ್ಳಿ ಗ್ರಾಮಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯಾವುದೇ ಭದ್ರತೆ ಇಲ್ಲದೆ ಅಮಾಯಕ ಮಹಿಳೆಯರಿಗೆ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ನೀಡಿ ತುಂಬಲು ವಿಪರೀತ ಕಿರುಕುಳ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಗಳನ್ನು ನಿಯಂತ್ರಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿ ಕಠಿಣ ಕ್ರಮಗಳನ್ನು ತಂದಿದ್ದರೂ ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ತಪ್ಪಿಲ್ಲ ಈ ನಿಟ್ಟಿನಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳು ಹಾಗೂ ಮಹಿಳೆಯರು ಬೆಳಗಾವಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ಈ ಕುರಿತು ಇನ್ ನ್ಯೂಸ್ ನೊಂದಿಗೆ ಮಾತನಾಡಿದ ಮಹಿಳೆಯ, ಅರ್ದ ಹಣ ತುಂಬಿದ್ದು ಅವಕಾಶ ನೀಡಿ ಎಂದು ಕೇಳಿದರು ಕಿರುಕುಳ ನೀಡುತ್ತಿದ್ದಾರೆ ನಾವು ಜಿಲ್ಲಾಧಿಕಾರಿಯವರನ್ನು ಭೇಟಿಯಾಗುತ್ತೇವೆ ಎಂದರು

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರಗತಿ ಎಂಬ ಮಹಿಳೆ ಪ್ರತಿಕ್ರಿಯಿಸಿ ನಮ್ಮ ತಂದೆ ತಾಯಿ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದರು ಅರ್ಧ ತುಂಬಿದ್ದರು ಈಗ ಅವರು ತೀರಿಕೊಂಡಿದ್ದು ಇದ್ದು ಒಂದು ಮನೆಯು ಮಳೆಗಾಲದಲ್ಲಿ ಬಿದ್ದು ಹೋಗಿದೆ ನಮ್ಮ ಸಹೋದರರಿಗೆ ಸಾಲ ತುಂಬಲು ಕಿರುಕುಳ ನೀಡುತ್ತಿದ್ದಾರೆ ಅವರು ಕೂಲಿ ಮಾಡುತ್ತಿದ್ದುಹೇಗೆ ತುಂಬಬೇಕೆಂದು ಪ್ರಶ್ನಿಸಿದರು

ಮೈಕ್ರೋ ಫೈನಾನ್ಸ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಮರಕುಂಬಿ ಉತ್ತರ ಕರ್ನಾಟಕ ಘಟಕದ ಅಧ್ಯಕ್ಷ ಮಂಜುನಾಥ ಜಲ್ಲಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Tags:

error: Content is protected !!