ನರೇಗಾ ಕಾರ್ಮಿಕರ ಬಾಕಿ ವೇತನವನ್ನು ತಕ್ಷಣ ಪಾವತಿಸಬೇಕು. ಮೇಟಿ ರೆಜಿಸ್ಟರ್ ಮಾಡಬೇಕೆಂದು ಆಗ್ರಹಿಸಿ ಇಂದು ಸವದತ್ತಿಯ ತಾಲೂಕಿನ ಮರಕುಂಬಿಯ ನರೇಗಾ ಕೂಲಿ ಕಾರ್ಮಿಕರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಿದರು.

ಇಂದು ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯಾಲಯದ ಎದುರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನರೇಗಾ ಕಾರ್ಮಿಕರು ಪ್ರತಿಭಟನೆಯನ್ನು ನಡೆಸಿದರು.ಈ ಕುರಿತಾದ ಮನವಿಯನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷೆ ಮಹಿಳಾ ಶಕುಂತಲಾ ಇಳಗೆ ಅವರು ಕಳೆದ ಮೂರು-ನಾಲ್ಕು ವರ್ಷದಿಂದ ಆದರೇ ಇಲ್ಲಿಯ ವರೆಗೂ ಮೇಟಿ ಸರ್ಟಿಫೈ ಮಾಡಲಾಗುತ್ತಿಲ್ಲ. ಅಲ್ಲದೇ ಮೇಟಿ ಪೇಮೆಂಟ್ ಕೂಡ ನೀಡಲಾಗುತ್ತಿಲ್ಲ ಈ ಹಿನ್ನೆಲೆ ಜಿಲ್ಲಾ ಪಂಚಾಯಿತಿಯ ಈಗ ಮೂರನೇ ಬಾರಿ ತರಲಾಗುತ್ತಿದೆ. ಕಳೆದ 4 ತಿಂಗಳಿನಿಂದ ವೇತನವನ್ನು ಸಹ ನೀಡುತ್ತಿಲ್ಲ. ನರೇಗಾ ಕಾರ್ಮಿಕರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಸಾಲಗಾರರು ತೊಂದರೆ ನೀಡುತ್ತಿದ್ದಾರೆ. ಬೆವರು ಸುರಿಸಿ ದುಡಿದ ಕೆಲಸಕ್ಕೆ ನಾವು ವೇತನವನ್ನು ಕೇಳುತ್ತಿದ್ದೇವೆ ಎಂದರು.
ಇನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಬೆಳಗಾವಿ ಜಿಲ್ಲಾಧ್ಯಕ್ಷ ಇರ್ಫಾನ್ ಬಾಗೇವಾಡಿ ಅವರು ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ವಂಚನೆಯಾಗುತ್ತಿದೆ. ಸವದತ್ತಿಯ ತಾಲೂಕಿನ ಮರಕುಂಬಿ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನರೇಗಾ ಕಾರ್ಮಿಕರಿಗೆ 4-5 ತಿಂಗಳಿನಿಂದ ವೇತನವನ್ನು ನೀಡಿಲ್ಲವೆಂದು ಆರೋಪಿಸಿದರು.
ಈ ವೇಳೆ ಸವದತ್ತಿಯ ತಾಲೂಕಿನ ಮರಕುಂಬಿಯ ನರೇಗಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.