ಉಪ ಮುಖ್ಯಮಂತ್ರಿ ಡಿ,ಕೆ ಶಿವಕುಮಾರ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ನೇತೃತ್ವದಲ್ಲಿ ಡಿ ಕೆ ಶಿವಕುಮಾರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಡಿ ಕೆ ಶಿವಕುಮಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಮುಸ್ಲಿಂರಿಗೆ ನಾಲ್ಕು ಪ್ರತಿಶತ ಮೀಸಲಾತಿ ನೀಡುವುದರಲ್ಲಿ ಯಾವುದೇ ತೊಂದರೆಯಾದರೆ ನಾವು ಸಂವಿಧಾನವನ್ನ ಬದಲಿಸಲು ಸಿದ್ದ ಎಂದು ಉದ್ಧಟತನ ಹೇಳಿಕೆ ನೀಡಿರುವುದು ಖಂಡನೀಯವಾಗಿದೆ ಕೇವಲ ಒಂದು ಸಮುದಾಯದ ಓಲೈಕೆಗಾಗಿ ಈ ತರ ಹೇಳಿಕೆ ನೀಡುವದು ಸಂವಿಧಾನ ವಿರೋಧಿಯಾಗಿದೆ ಭಾರತೀಯ ಜನತಾ ಪಕ್ಷ ಇದನ್ನು ತೀರ್ವವಾಗಿ ಖಂಡಿಸುತ್ತದೆ ಎಂದರು.