khanapur

ಖಾನಾಪೂರದಲ್ಲಿ ಬಿಜೆಪಿ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Share

ಖಾನಾಪೂರ ತಾಲೂಕಾ ಭಾರತೀಯ ಜನತಾ ಪಕ್ಷದ ವತಿಯಿಂದ ಖಾನಾಪೂರ ಶಿವಸ್ಮಾರಕ ಚೌಕ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಸ್ಲಿಂ ಸಮುದಾಯಕ್ಕೆ ಶೇಕಡಾ ನಾಲ್ಕು ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ ಆದರೆ ನೀಡಿರುವ ಭರವಸೆಯನ್ನು ಈಡೇರಿಸಲು ಸಂವಿಧಾನವನ್ನು ಸಹ ಒಂದು ಹಂತದಲ್ಲಿ ಬದಲಾಯಿಸಲಾಗುವುದು ಎಂದು ಅವರು ಬಲವಾದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಕಾಂಗ್ರೆಸ್ ಸರ್ಕಾರವು ಸಾಂವಿಧಾನಿಕ ವಿರೋಧಿ, ದಲಿತ ವಿರೋಧಿ,ರೈತ ವಿರೋಧಿ ಮತ್ತು ಹಿಂದೂ ವಿರೋಧಿ ಎಂದು ಕಂಡು ಬರುತ್ತಿದೆ ಆದ್ದರಿಂದ ಈ ಕ್ರಮವನ್ನು ವಿರೋಧಿಸಿ ತಾಲೂಕಾ ಭಾರತೀಯ ಜನತಾ ಪಕ್ಷದ ತಾಲೂಕಾ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಬಿಜೆಪಿ, ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್,ಜಿಲ್ಲಾ ಉಪಾಧ್ಯಕ್ಷ ಪ್ರಮೋದ್ ಕೊಚೋರಿ, ಪಂಡಿತ್ ಓಗಲೆ ಸೇರಿದಂತೆ ಇನ್ನಿತರ ಮಾರ್ಗದರ್ಶನದಲ್ಲಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕುಣಿತ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡರು, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು ಈ ಸಂದರ್ಭದಲ್ಲಿ ಮಾಜಿ ತಾಲೂಕಾ ಅಧ್ಯಕ್ಷ ಸಂಜಯ್ ಕುಬಲ್, ಮಾಜಿ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಸುರೇಶ್ ದೇಸಾಯಿ,,ಯುವ ಬಿಜೆಪಿ ಮುಖಂಡ ಕಿಶೋರ್ ಹೆಬ್ಬಾಳಕರ,ನಂದಗಡ ಗ್ರಾಮ ಪಂಚಾಯಿತಿ ಸದಸ್ಯ ಪ್ರದೀಪ್ ಪವಾರ್ ಚೈತನ ಮನೇರಕರ ಸೇರಿದಂತೆ ಬಹುಸಂಖ್ಯೆಯಲ್ಲಿ ಯುವ ಬಿಜೆಪಿ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದು ಪ್ರತಿಭಟನೆ ಯಶಸ್ವಿ ಗೊಳಿಸಿದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!