ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ವಲಯಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ. ಸಾಕಷ್ಟು ಹಣ ಉಚಿತ ಕಾರ್ಯಕ್ರಮಗಳಿಗೆ ಹೋಗುತ್ತದೆ. ಉಳಿದಿದ್ದರಲ್ಲಿಯೇ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಮಾನ್ಯವಾಗಿ ಇದೊಂದು ಒಳ್ಳೆಯ ಬಜೆಟ್. ಬೆಳಗಾವಿ ಜಿಲ್ಲೆಗೂ ಅನೇಕ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದು, ಬೆಳಗಾವಿ ಜಿಲ್ಲೆಗೆ ನೀರಾವರಿ ಮತ್ತು ಜಲ ಸಂರಕ್ಷಣೆ ಯೋಜನೆಗಳಿಗೆ ಅನುದಾನ ಘೋಷಿಸಿದ್ದಾರೆ. ಬೆಳಗಾವಿ ಸ್ಮಾರ್ಟ ಸಿಟಿ ಯೋಜನೆ, ಬೆಳಗಾವಿ ಮತ್ತು ಧಾರವಾಡ ನಡುವಿನ ಸಂಪರ್ಕವನ್ನು ಬಲಪಡಿಸಲು ಹೊಸ ಎಕ್ಸ್ಪ್ರೆಸ್ವೇ ನಿರ್ಮಾಣಕ್ಕೆ 1,200 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ಅಥಣಿ ತಾಲೂಕಿಗೆ ನೂತನ ಕೃಷಿ ಕಾಲೇಜು ಮುಂಜೂರು ಮಾಡಲಾಗಿದ್ದು, ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 199 ಕೋಟಿ ರೂ. ಘೋಷಣೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‌ನಿಂದ ಬೆಳಗಾವಿ ಜಿಲ್ಲೆ ಇನ್ನಷ್ಟು ಪ್ರಗತಿಯತ್ತ ಸಾಗುತ್ತದೆ ಎಂದು ತಿಳಿಸಿದ್ದಾರೆ.