ರಾಷ್ಟ್ರೀಯ ಸೇವಾ ಯೋಜನೆಯಲ್ಲಿನ ಗಮನಾರ್ಹ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರದ ರಾಜ್ಯ ಮಟ್ಟದ ಅತ್ಯುತ್ತಮ ಎನ್ ಎಸ್ ಎಸ್ ಸ್ವಯಂಸೇವಕ ಪ್ರಶಸ್ತಿಯನ್ನು ನೀಡಲಾಗಿದೆ.

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜಿತ ಟಿಳಕವಾಡಿಯ ಗೋಗಟೆ ವಾಣಿಜ್ಯ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕಿ ಧನಶ್ರೀ ಉತ್ತಮ್ ಶಿಂಧೆ ಅವರಿಗೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿನ ಅತ್ಯುತ್ತಮ ಕೆಲಸಕ್ಕಾಗಿ ಕರ್ನಾಟಕ ಸರ್ಕಾರದ ರಾಜ್ಯ ಮಟ್ಟದ ಅತ್ಯುತ್ತಮ NSS ಸ್ವಯಂಸೇವಕ ಪ್ರಶಸ್ತಿ ನೀಡಲಾಗಿದೆ.