State

ರೈತರ ಹೊಲಗಳಿಗೆ ಸಂಪರ್ಕ ರಸ್ತೆ ನಿರ್ಮಿಸಲು ಸದನದಲ್ಲಿ ಮಹತ್ವದ ಚರ್ಚೆ

Share

ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸಲು ರಸ್ತೆಗಳನ್ನು ನಿರ್ಮಿಸಬೇಕೆಂದು ವಿಧಾನಸಭೆಯಲ್ಲಿ ನವಲಗುಂದ ಶಾಸಕ ಎನ್.ಎಚ್.ಕೊನರೆಡ್ಡಿ ಅವರು ಆಗ್ರಹಿಸಿದ್ದು, ಇದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಂಬರುವ ಬಜೆಟನಲ್ಲಿ ಹೊಸ ಯೋಜನೆ ರೂಪಿಸಲಾಗುವುದು ಎಂದರು.

ರೈತರು ತಮ್ಮ ಜಮೀನಿಗೆ ಸಂಪರ್ಕಿಸಲು ರಸ್ತೆ ನಿರ್ಮಾಣಕ್ಕಾಗಿ ರೂಪಿಸಿದ್ದ ನಮ್ಮ ಹೊಲ ನಮ್ಮ ರಸ್ತೆ ಯೋಜನೆಯನ್ನು ಮರು ಜಾರಿಗೊಳಿಸಬೇಕೆಂದು ನವಲಗುಂದ ಶಾಸಕ ಎನ್.ಎಸ್. ಕೋನರೆಡ್ಡಿ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಆಗ್ರಹಿಸಿದರು.ಅದರಂತೆ ಪ್ರಗತಿಪಥ ಯೋಜನೆ, ಕೇಂದ್ರ ಸರ್ಕಾರದ ಪಿ.ಎಂ.ಇ.ಯೋಜನೆಯ ಮಾನದಂಡಗಳನ್ನು ಬದಲಾಯಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನಮ್ಮ ಹೊಲ ನಮ್ಮ ರಸ್ತೆ ಯೋಜನೆ ಈಗಾಗಲೇ ಸ್ಥಗಿತಗೊಂಡಿದ್ದು, ಬಜೆಟಿನಲ್ಲಿ ಹೊಸ ಯೋಜನೆಯನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವಣೆಯನ್ನು ಸಲ್ಲಿಸಲಾಗಿದೆ. 5000 ಕೋಟಿ ಅನುದಾನದಲ್ಲಿ ಪ್ರಗತಿಪಥ ಯೋಜನೆಯಡಿ ಎಲ್ಲ ಶಾಸಕರಿಗೂ 15 ಕಿಲೋ ಮೀಟರ್ ರಸ್ತೆ ನಿರ್ಮಿಸಲು ಆರ್ಥಿಕ ಇಲಾಖೆಯಿಂದ ಮಂಜೂರಾತಿ ದೊರೆತಿದೆ. ತಿಂಗಳೊಳಗೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು. ಇನ್ನು ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯ 4ನೇ ಹಂತದ ಮಾನದಂಡಗಳು ಜಾರಿಯಾಗಿದ್ದು, ರಾಜ್ಯದ ಎಲ್ಲ ದೊಡ್ಡ ಗ್ರಾಮಗಳಿಗೆ ರಸ್ತೆಗಳು ಸರಿಯಾಗಿವೆ. ಮಾನದಂಡಗಳ ಸರಳೀಕರಣಕ್ಕೆ ಕೇಂದ್ರಕ್ಕೆ ಪತ್ರ ಬರೆಯಲಾಗಿದ್ದು, ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸಿದೆ ಎಂದರು.

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರಾದ ಎನ್.ಎಚ್. ಕೊನರೆಡ್ಡಿ ಅವರು, ರೈತರ ಹೊಲಗಳಿಗೆ ರಸ್ತೆ ನಿರ್ಮಾಣ ಯೋಜನೆ ಜಾರಿಯಾದರೇ, ಐತಿಹಾಸಿಕ ನಿರ್ಣಯ ಕೈಗೊಂಡಂತಾಗುತ್ತದೆ ಎಂದರು.

Tags:

error: Content is protected !!