ಬೆಳಗಾವಿ: ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜೈ ಕಿಸಾನ್ ಖಾಸಗಿ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರೈತರ ಹಿತರಕ್ಷಣಾ ತರಕಾರಿ ವ್ಯಾಪಾರಸ್ಥರ ಸಮಿತಿ, ಜೈ ಕಿಸಾನ್ ಮಾರುಕಟ್ಟೆಯ ವ್ಯಾಪಾರಿ ಫಕೀರ್ ಗುಡಾಜಿ ಹೇಳಿದರು.

ಮಂಗಳವಾರ ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದರು. ಕಳೆದ 15 ವರ್ಷಗಳಿಂದ ಜೈ ಕಿಸಾನ್ ಖಾಸಗಿ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಸಿಕೊಂಡು ಬಂದಿದ್ದೇವೆ. ಲಾಟರಿ ಮೂಲಕ ಒಂದಿಷ್ಟು ಜನರಿಗೆ ಮೂರು ಮೂರು ಮಳಿಗೆಯನ್ನು ಹಂಚಿಕೆ ಮಾಡಿದ್ದಾರೆ. ತಲತಲಾಂತರದಿಂದ ವ್ಯಾಪಾರ ಮಾಡಿಕೊಂಡು ಬರುವ ವ್ಯಾಪಾರಸ್ಥರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
ಮತ್ತೋರ್ವ ಮಹಿಳಾ ವ್ಯಾಪಾರಸ್ಥರು ಮಾತನಾಡಿ ತರಕಾರಿ ವ್ಯಾಪಾರವನ್ನು ನಿತ್ಯ ಎರಡು ಬಾರಿ ತರಕಾರಿಯನ್ನು ಖರೀದಿ ಮಾಡುವಾಗ ರೈತರ ಸಮ್ಮುಖದಲ್ಲಿ ಹರಾಜು ಪ್ರಕ್ರಿಯೆ ಮಾಡಬೇಕು ಆದರೆ ಇದನ್ನು ಗಾಳಿಗೆ ತೂರಿ ತಮಗೆ ಬೇಕಾದ ರೀತಿಯಲ್ಲಿ ಹರಾಜು ಮಾಡಿ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ ಎಂದರು.ಜೈ ಕಿಸಾನ್ ಖಾಸಗಿ ತರಕಾರಿ ಮಾರುಕಟ್ಟೆಯಲ್ಲಿ ಕಾನೂನು ಬಾಹಿರವಾಗಿ ನಡೆದುಕೊಳ್ಳುವ ವ್ಯಕ್ತಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸುಚೇತಾ ಪಾವಸೆ, ಕೃಷ್ಣಾ ದೇಸಾಯಿ, ಡಿ.ಎಂ.ನೇಸರಗಿ, ಮೋಹಸಿನ ಖಾನಾಪುರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.