ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ಮೇಳವನ್ನು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಅಣ್ಣಾ ಜಾರಕಿಹೊಳಿಯವರು ಉದ್ಘಾಟಿಸಿದರು.
ಕರ್ನಾಟಕ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೆಳಗಾವಿ ವಿವಿಧ ಸಂಘ ಸಂಸ್ಥೆಗಳು, ವಿವಿಧ ಆಸ್ಪತ್ರೆಗಳು ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸವದತ್ತಿ ಪಟ್ಟಣದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕರಾದ ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ ಅವರು ಸೇರಿ ವೈದ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.