ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಹಾಗೂ ಡಿಕೆಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಡಿಕೆಶಿವಕುಮಾರ್ ಪ್ರತಿಕೃತಿ ದಹನ ಮಾಡಿ ಕೂಡಲೇ ಕೂಡಲೇ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಡಿಕೆಶಿವಕುಮಾರ್ ವಿರುದ್ಧ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಬಳಿಕ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಡಿಕೆಶಿವಕುಮಾರ್ ಕೇವಲ ಅಲ್ಪಸಂಖ್ಯಾತರ ತುಷ್ಟಿಕರಣ ಮಾಡುವ ಕಾರಣಕ್ಕೆ ಮೀಸಲಾತಿ ಕೊಡುವ ವಿಚಾರವನ್ನು ಮಾತನಾಡಿದ್ದಾರೆ. ಮೀಸಲಾತಿ ಕೊಡುವ ವಿಚಾರದಲ್ಲಿ ಏನಾದರೂ ಅಡ್ಡಿಯಾದರೆ ಸಂವಿಧಾನ ಬದಲಾವಣೆ ಮಾಡಿ ಮೀಸಲಾತಿ ಕೊಡುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ಬಿಜೆಪಿ 312 ಮಂಡಲದಲ್ಲಿ ಇಂದು ಸಾಂಕೇತಿಕ ಹೋರಾಟ ಮಾಡಿದ್ದೇವೆ. ಉಪಮುಖ್ಯಮಂತ್ರಿ ಡಿಕೆಶಿ ತಮ್ಮ ಹೇಳಿಕೆಯನ್ನು ಹಿಂದೆ ಪಡೆಯಬೇಕು. ಸಿಎಂ ಸಿದ್ದರಾಮಯ್ಯ ಡಿಕೆಶಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.