ಹುಬ್ಬಳ್ಳಿಯಲ್ಲಿ ರಂಜಾನ್ ಹಬ್ಬದ ಸಂಭ್ರಮ ಮನೆ ಮಾಡಿದ್ದು ರಂಜಾನ್ ಹಬ್ಬವನ್ನು ಮುಸ್ಲಿಂರು ಅತ್ಯಂತ ಶ್ರದ್ಧಾ, ಭಕ್ತಿಯಿಂದ ಆಚರಣೆ ಮಾಡುತ್ತಾ ಬಂದಿದ್ದು. ಹುಬ್ಬಳ್ಳಿಯಲ್ಲಿ ಹಿರಿಯರಿಂದ ಹಿಡಿದು ಮಕ್ಕಳು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.

ಹುಬ್ಬಳ್ಳಿ ಈದ್ಗಾ ಮೈದಾನದವರೆಗೂ ಸಾವಿವರು ಮುಸ್ಲಿಂ ಸಮಾಜದವರು. ಎಲ್ಲರೂ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಇಸ್ಲಾಂ ಧರ್ಮಗುರುಗಳಿಂದ ಅಲ್ಲಿ ಧರ್ಮ ಬೋಧನೆ ಕೂಡ ನಡೆಯಿತು. ಪ್ರಾರ್ಥನೆ ನಂತರ ಪರಸ್ಪರ ಒಬ್ಬರಿಗೊಬ್ಬರು ತಬ್ಬಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮುಂಜಾಗೃತ ಕ್ರಮವಾಗಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಸೂಕ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ರಂಜಾನ್ ಹಬ್ಬ , ಯುಗಾದಿ ಹಬ್ಬ ಎಲ್ಲವೂ ಒಟ್ಟಿಗೆ ಬಂದರು ಯಾವುದೇ ಘಟನೆ ನಡೆದಿಲ್ಲ ಎಲ್ಲರೂ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಿದ್ದಾರೆ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಜನತೆಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಧನ್ಯವಾದಗಳನ್ನು ತಿಳಿಸಿದ್ದಾರೆ.