Belagavi

ಬಿಸಿಲಿನಲ್ಲಿ ಮಹಾನಗರ ಪಾಲಿಕೆಗೆ ಬರುವ ಜನರಿಗೆ  ನೀರು, ಆಸನ, ನೆರಳಿನ ವ್ಯವಸ್ಥೆ ಮಾಡುವಂತೆ ಆಡಳಿತ ಪಕ್ಷದ ನಾಯಕ ಗಿರೀಶ ಧೋಂಗಡಿ ಮನವಿ

Share

ಬೇಸಿಗೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಗೆ ವಿವಿಧ ಕೆಲಸ ಕಾರ್ಯಗಳಿಗೆ ಬರುವ ಜನರಿಗೆ ಅನುಕೂಲವಾಗುವಂತೆ ಮೂಲಸೌಲಭ್ಯಗಳನ್ನು ಒದಗಿಸಬೇಕೆಂದು ನಗರಸೇವಕ ಮತ್ತು ಆಡಳಿತ ಪಕ್ಷದ ನಾಯಕ ಗಿರೀಶ ಧೋಂಗಡಿ ಅವರು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು.

ಇಂದು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾದ ಶುಭಾ. ಬಿ. ಅವರಿಗೆ ನಗರಸೇವಕ ಮತ್ತು ಆಡಳಿತ ಪಕ್ಷದ ನಾಯಕ ಗಿರೀಶ ಧೋಂಗಡಿ ಅವರು ಮನವಿಯನ್ನು ಸಲ್ಲಿಸಿದರು. ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಈ ಹಿನ್ನೆಲೆ ಬೆಳಗಾವಿಯ ಮಹಾನಗರ ಪಾಲಿಕೆಗೆ ವಿವಿಧ ಕೆಲಸಗಳಿಗಾಗಿ ಬರುವ ಜನರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ನೆರಳಿನ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಯೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಲಾಯಿತು.ಇದಕ್ಕೆ ಮಹಾನಗರ ಪಾಲಿಕೆಯ ಆಯುಕ್ತರು ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದು, ಈ ಕುರಿತು ನಗರಸೇವಕ ಗಿರೀಶ ಧೋಂಗಡಿ ಅವರು ಇನ್ ನ್ಯೂಸ್’ಗೆ ಹೆಚ್ಚಿನ ಮಾಹಿತಿಯನ್ನು ನೀಡಿದರು.

 

Tags:

error: Content is protected !!