ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಕ್ಷೇತ್ರದಲ್ಲೇ ಬಿಜೆಪಿ ಅಧ್ಯಕ್ಷ ಮೇಲುಗೈ ಸಾಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರ ಆಪ್ತರಾಗಿರುವ ಬಬಲೇಶ್ವರ ಮತಕ್ಷೇತ್ರದ ಮುಖಂಡ ಹಾಗೂ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಇವರನ್ನು ಅಧಿಕೃತವಾಗಿ ಘೋಷಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷರ ಪ್ರಕ್ರಿಯೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಘೋಷಿಸಿದರು. ವಿಜಯಪುರ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದರು.ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಬಬಲೇಶ್ವರ ಮುಖಂಡ ವಿಜುಗೌಡ ಪಾಟೀಲ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.