Banglore

ರಾಯಬಾಗ ಕುಡಚಿಯಲ್ಲಿ ರಸ್ತೆ ಅಗಲೀಕರಣ ಮಾಡಿ

Share

ರಾಯಬಾಗ ತಾಲೂಕಿನ ಕುಡಚಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆಗಳು ಹೆಚ್ಚಾಗಿದ್ದು, ಇಕ್ಕಟ್ಟಿನ ರಸ್ತೆಗಳಲ್ಲಿ ಭಾರಿ ವಾಹನಗಳ ನಿರಂತರ ಓಡಾಟದಿಂದ ಆಗುತ್ತಿರುವ ಅಪಘಾತಗಳ ಸಂಖ್ಯೆಯನ್ನು ತಪ್ಪಿಸಲು ರಸ್ತೆ ಅಗಲೀಕರಣ ಮಾಡುವಂತೆ ಇಂದು ವಿಧಾನಸಭೆಯ ಅಧಿವೇಶನದಲ್ಲಿ ರಾಯಬಾಗ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ ಆಗ್ರಹಿಸಿದರು.

ಇಂದು ವಿಧಾನಸಭೆಯ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ ರಾಯಬಾಗ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ ರಾಯಬಾಗ ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳು ಹೆಚ್ಚಾಗಿದ್ದು, ಇಕ್ಕಟ್ಟಿನ ರಸ್ತೆಗಳಲ್ಲಿ ಭಾರಿ ವಾಹನಗಳ ಓಡಾಟಗಳ ನಿರಂತರ ಓಡಾಟದಿಂದ ಆಗುತ್ತಿರುವ ಸಮಸ್ಯೆಯನ್ನು ನೀಗಿಸಲು ರಸ್ತೆ ಅಗಲೀಕರಣ ಮಾಡಬೇಕು. ಅದೇ ರೀತಿ ಹಾರೂಗೇರಿ ಕ್ರಾಸ್ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕೆಂದರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು, ಲೋಕೋಪಯೋಗಿ ಇಲಾಖೆಯಲ್ಲಿ ಅನುದಾನವಿದ್ದು, ಭೂಮಿಯ ಕೊರತೆ ಇದೆ. ಭೂಮಿಯನ್ನು ನೀಡುವುದಾರೇ, ರಸ್ತೆ ಅಗಲೀಕರಣ ಮಾಡಲಾಗುವುದು ಎಂದರು .

Tags:

error: Content is protected !!