ದೆಹಲಿ ಪ್ರವಾಸಕ್ಕೆ ತೆರಳಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಬಾಗಲಕೋಟೆಯಲ್ಲಿ ಮಾತನಾಡಿ ಸಂಪುಟ ಪುನಾರಚನೆ ಸಿಎಂಗೆ ಬಿಟ್ಟ ವಿಚಾರ. ತಾವು ಬೇರೆ ಕೆಲಸಕ್ಕೆ ದೆಹಲಿಗೆ ಹೊರಟಿರುವುದಾಗಿ ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಯುಗಾದಿ ಬಳಿಕ ದೆಹಲಿಗೆ ತೆರಳುತ್ತಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ದೆಹಲಿ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೆಹಲಿಯಲ್ಲಿ ಕರ್ನಾಟಕ ಭವನದ ಉದ್ಘಾಟನೆಯಲ್ಲಿ ಭಾಗಿಯಾಗಲು ಹೊರಟಿದ್ದೇವೆ. ಹಲವಾರು ಕೇಂದ್ರ ಸಚಿವರನ್ನು ರಾಜ್ಯದ ಅಭಿವೃದ್ಧಿಗಾಗಿ ಭೇಟಿಯಾಗಲೂ ಹೊರಟಿದ್ದೇವೆ. ಅಲ್ಲದೇ, ಪಕ್ಷದ ಕೆಲ ವಿಚಾರಗಳನ್ನು ಚರ್ಚಿಸಲು ಹೋಗುತ್ತಿರುವುದಾಗಿ ತಿಳಿಸಿದರು.
ಇನ್ನು ಸಂಪುಟ ಪುನಾರಚನೆ ಸಿಎಂಗೆ ಬಿಟ್ಟ ವಿಚಾರ. ಸಿಎಂ ಈ ಕುರಿತು ತಿರ್ಮಾಣ ಕೈಗೊಳ್ಳುತ್ತಾರೆ. ಹಾಲಿನ ದರ ಏರಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ರೈತರು ಬದುಕಬೇಕೋ ಬೇಡವೋ? ಎಂದು ಪ್ರಶ್ನಿಸಿದರು. ಇನ್ನು ಗ್ಯಾರಂಟಿಗಳನ್ನು ಜನರು ಬೆಲೆ ಏರಿಕೆಯಿಂದ ತಪ್ಪಿಸಿಕೊಳ್ಳಲು ಜಾರಿಗೊಳಿಸಲಾಗಿದೆ. ಇನ್ನು ವಕ್ಫ್ ತಿದ್ದುಪಡಿ ಬಿಲ್ ಮಂಡನೆ ಬಗ್ಗೆ ತಮ್ಮ ಪಕ್ಷ ಈಗಾಗಲೇ ತನ್ನ ಅಭಿಪ್ರಾಯವನ್ನು ತಿಳಿಸಿರುವುದಾಗಿ ಹೇಳಿದರು.