Belagavi

ಬೆಳಗಾವಿ: ಶಾಸಕ ರಾಜು ಕಾಗೆ ಸಹೋದರನ ಪುತ್ರನಿಂದ ಕಾರು ಅಪಘಾತ

Share

ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಪಟ್ಟಣದ ಹೊರ ವಲಯದ ಪುನಾ ಬೆಂಗಳೂರು ಹೆದ್ದಾರಿಯಲ್ಲಿ ಶಾಸಕ ರಾಜು ಕಾಗೆ ಅವರ ಸಹೋದರನ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಗುದ್ದಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೂಲತಃ ಗೋಕಾಕದ ಬಸವರಾಜ ಪುಡಕಲಕಟ್ಟಿ ಹಾಗೂ ಸ್ನೇಹಿತರು ಕೆಲಸಕ್ಕಾಗಿ ಬೆಳಗಾವಿಯಿಂದ ಕಿತ್ತೂರ ಕಡೆಗೆ ಬೈಕ್ ಮೇಲೆ ಬರುತ್ತಿದ್ದರು. ಶಾಸಕ ರಾಜು ಕಾಗೆ ಅವರ ಸಹೋದರನ ಪುತ್ರ ಶ್ರೀಪಾದ ಸಿದ್ದನಗೌಡ ಕಾಗೆ ಪ್ರಯಾಣಿಸುತ್ತಿದ್ದ ಕಾರು ಬೈಕಗೆ ಗುದ್ದಿದ್ದರಿಂದ ಬಸವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ನೇಹಿತರಾದ ಸಣ್ಣ ವಿಠಲ ದುರದುಂಡಿ ಹಾಗೂ ನಿಂಗಪ್ಪ ಹೆಬ್ಬಾಳಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸವರಾಜ ಪುಡಕಲಕಟ್ಟಿಯ ಶವವನ್ನು ಬೆಳಗಾವಿ ಬಿಮ್ಸಗೆ ರವಾನಿಸಲಾಗಿದೆ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು
ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Tags:

error: Content is protected !!