ಹುಬ್ಬಳ್ಳಿಯಲ್ಲಿ ಏ. 20ರಂದು ಕೂಡಲಸಂಗಮ ಪಂಚಮಸಾಲಿ ಜಗದ್ಗುರು, ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಪಂಚಮಸಾಲಿ ಟ್ರಸ್ಟ್ ನಿಂದ ನಡೆಯಬೇಕಿದ್ದ ಸಭೆಯನ್ನು ಏ.19ಕ್ಕೆ ಕೂಡಲಸಂಗಮದಲ್ಲಿ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ

ಹುಬ್ಬಳ್ಳಿಯಲ್ಲಿ ನಿಗದಿಯಾಗಿದ್ದ ಪಂಚಮಸಾಲಿ ಟ್ರಸ್ಟ್ ಸಭೆಯ ದಿನಾಂಕ, ಸ್ಥಳ ಬದಲಾಯಿಸಿ ಕೂಡಲಸಂಗಮಕ್ಕೆ ಶಿಫ್ಟ್ ಮಾಡಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಾಗಲಕೋಟೆ ಪಂಚಮಸಾಲಿ ರೈತ ಘಟಕದ ಅಧ್ಯಕ್ಷ ಅಂಬರೀಶ್ ನಾಗೂರ,
ಪಂಚಮಸಾಲಿ ಪೀಠದ ಟ್ರಸ್ಟ್ ಸಭೆಯು ಏಪ್ರಿಲ್ 19 ರಂದು ಮುಂಜಾನೆ 11:30ಕ್ಕೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠದ ಆವರಣದಲ್ಲಿ ನಡೆಯಲಿದ್ದು ಪಂಚಮಸಾಲಿ ರಾಷ್ಟ್ರೀಯ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪಂಚಮಸಾಲಿ ಸಮಾಜದ ಹಾಲಿ ಮಾಜಿ ಸಚಿವರು, ಶಾಸಕರು, ಸಂಸದರು, ಮುಖಂಡರು ಹಾಗೂ ರಾಜ್ಯದ ಎಲ್ಲಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿರುತ್ತಾರೆ. ಸಭೆಯಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭಿಪ್ರಾಯಕ್ಕೂ ಮನ್ನಣೆ ನೀಡಲಾಗುತ್ತಿದ್ದು, ಅಂದಿನ ಸಭೆಯಲ್ಲಿ ಪೀಠದ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದೆಂದು ಅವರು ಎಂದು ತಿಳಿಸಿದರು.