raybag

ಒಳಮೀಸಲಾತಿಗೆ ಮುಖ್ಯಮಂತ್ರಿಗಳು 2 ತಿಂಗಳು ಕಾಲಾವಕಾಶ ಕೇಳಿದ್ದಾರೆ. : ಸತೀಶ್ ಜಾರಕಿಹೊಳಿ

Share

ರಾಯಬಾಗ : ಒಳಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ತಿಂಗಳ ಕೇಳಿದ್ದಾರೆ ಅಲ್ಲಿಯವರೆಗೂ ಕಾಯಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ರಾಯಬಾಗ ತಾಲೂಕಾ ರೈತರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಂದಿರಾ ಕ್ಯಾಂಟೀನ್ ಪ್ರಾರಂಭಕ್ಕೆ ವಿಳಂಬವಾಗುತ್ತಿರುವ ಕುರಿತು ಸ್ಥಳೀಯ ಪುರಸಭೆ ಕ್ರಮ ಕೈಗೊಳ್ಳಬೇಕು. ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸುತ್ತಿರುವ ಬಿಜೆಪಿ, ಅದು ಅವರ ಕೆಲಸ ಅವರು ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಸಕ್ತ ದಿನಗಳಲ್ಲಿ ಬೇಸಿಗೆಯ ಅಧಿಕವಾಗಿದ್ದು, ಎಲ್ಲಾ ರೈತರಿಗೂ ಸಮರ್ಪಕವಾಗುವಂತೆ ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಹರಿಸಬೇಕೆಂದು ಮನವಿ ಮಾಡಿಕೊಂಡರು.

Tags:

error: Content is protected !!