Bagalkot

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಯಿಂದ ಅತಿ ಕಡಿಮೆ ಸಮಯದಲ್ಲಿ ಜನಪ್ರಿಯತೆ ಕಳೆದುಕೊಂಡಿದೆ…

Share

ದೇಶದಲ್ಲೇ ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಕಳೆದುಕೊಂಡ ಸರ್ಕಾರ ಅಂದ್ರೆ ಅದು ಸಿದ್ದರಾಮಯ್ಯ ಸರ್ಕಾರ. ರಾಜ್ಯದ ಜನರು ನಾಳೆಯೇ ಚುನಾವಣೆ ನಡೆದರೂ ಈ ಸರ್ಕಾರವನ್ನ ಕಿತ್ತು ಎಸೆಯಲು ತಯಾರಾಗಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಅವರು ಬುಧವಾರದಂದು ಬಾಗಲಕೋಟೆ ಜಿಲ್ಲೆಯ ಲೋಕಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಬಿಜೆಪಿ ಜನಾಕ್ರೋಶ ಯಾತ್ರೆ ಮೈಸೂರಿನಿಂದ ಆರಂಭವಾಗಿ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಉಡುಪಿ,ಮಂಗಳೂರು, ಬೆಳಗಾವಿ ಸೇರಿದಂತೆ ಆ ಭಾಗದ ಎಲ್ಲ ಜಿಲ್ಲೆಗಳಲ್ಲಿ ಜನಾಕ್ರೋಶ ಯಾತ್ರೆ ಮುಗಿಸಿದ್ಧೇವೆ. ನಮ್ಮ ನಿರೀಕ್ಷೆಗೂ ಮೀರಿ ಜನಾಕ್ರೋಶ ಯಾತ್ರೆಗೆ ಬೆಂಬಲ ಸಿಕ್ಕಿದೆ ಎಂದರು.

ಇನ್ನು ರಾಜ್ಯ ಸರ್ಕಾರ ಸಾಕಷ್ಟು ನಿರೀಕ್ಷೆ ಹುಟ್ಟಾಕಿತ್ತು,ಆದ್ರೆ ಎಲ್ಲವನ್ನು ಹುಸಿಗೊಳಿಸಿದೆ.ಜನ ವಿರೋಧಿ ತಿರ್ಮಾನ,ಬೆಲೆ ಏರಿಕೆ, ಹಿಂದೂ ವಿರೋಧಿ ನೀತಿಯಿಂದ, ದೇಶದಲ್ಲೇ ಇಷ್ಟು ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಕಳೆದುಕೊಂಡ ಸರ್ಕಾರ ಅಂದ್ರೆ ಅದು ಸಿದ್ದರಾಮಯ್ಯ ಸರ್ಕಾರ.ಈ ಸರ್ಕಾರಕ್ಕೆ ಪಾಠ ಕಲಿಸಲು ಜನ್ರು ಕಾಯ್ತಿದ್ದಾರೆ. ವಿಪಕ್ಷವಾಗಿ ನಾವು ಪ್ರಾಮಾಣಿಕವಾಗಿ ನಮ್ಮ ಜವಾಬ್ದಾರಿ ನಿಭಾಯಿಸಿದ್ದೇವೆ ಎಂದರು.

Tags:

error: Content is protected !!