ಬೇಸಿಗೆ ಬಿಸಿಲಿನ ತಾಪದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ವಿಜಯಪುರ ತಾಲ್ಲೂಕಿನ ಮಡಸನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕೆರೆಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಕನ್ನೂರು ಹಾಗೂ ಮಡಸನಾಳ ಗ್ರಾಮದ ರೈತರು ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಜನ, ಜಾನುವಾರುಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿದ್ದು, ತಿಡಗುಂದಿ ಶಾಖಾ ಕಾಲುವೆ ಮೂಲಕ ಕೆರೆಗೆ ನೀರು ಹರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ನೀಡಿದ್ದಾರೆ..
