ಕಳೆದ ರಾತ್ರಿ ವಿಜಯಪುರ ಜಿಲ್ಲೆಯ ಕೆಲವೆಡೆ ಅಕಾಲಿಕ ಮಳೆ ಸರಿದಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಧಾರಾಕಾರ ಮಳೆ ಸುರಿದಿದೆ.

ಭಾರೀ ಮಳೆಯ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಭಾರಿ ಗುಡುಗು ಸಹಿತ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತತವಾಗಿ ಬೀದಿ ಬದಿ ವ್ಯಾಪಾರಿಗಳು ಪರದಾಡುವಂತಾಯಿತು. ಇನ್ನು ಮಳೆಯ ಅವಾಂತರಕ್ಕೆ ಕಿಲೋಮೀಟರ್ ಗಂಟಲೆ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.