ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದೇವಲಿಂಗಪ್ಪ ಹಾಗೂ ಜಮ್ಮಿಹಾಳ ಗ್ರಾಮಕ್ಕೆ ಇಂದು ಧಾರವಾಡ ಜಿಲ್ಲಾ ಪಂಚಾಯತಿ ಸಿಇಓ ಅವರು ಭೇಟಿ ನೀಡಿದ ಪಂಚಾಯತಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಕಲಘಟಗಿ ತಾಲೂಕಿನ ದೇವಿಲಿಂಗಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಮಗಾರಿ ಸ್ಥಳಕ್ಕೆಮೊದಲು ಭೇಟಿ ನೀಡಿದ ಜಿಲ್ಲಾ ಪಂಚಾಯತಿ ಸಿಇಓ ಭುವನೇಶ ಪಾಟೀಲ್ ಅವರು ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ದೇವಲಿಂಗಿಕೊಪ್ಪ ಹಾಗೂ ಜಮ್ಮಿಹಾಳ್ ಗ್ರಾಮಗಳ ಕಾಲುವೆ ನಿರ್ಮಾಣ ಮತ್ತು ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ ಮಾಡಿದ ಸಿಇಓ ಅವರು, ನಂತರ ಕಾರ್ಮಿಕರ ಆರೋಗ್ಯ ವಿಚಾರಿಸಿ ಸಂವಾದ ಮಾಡಿದರು. ಅಲ್ಲದೆ ಈ ವೇಳೆ ಪಂಚಾಯತಿ ಅಧಿಕಾರಿಗಳಿ ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಡಿಕೊಳ್ಳುವಂತೆ ಸೂಚನೆ ನೀಡಿದರು.
ಇನ್ನೂ ಈ ಸಂದರ್ಭದಲ್ಲಿ ಮಾನ್ಯ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ ಧಾರವಾಡ, ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ. ಉ.), ಗ್ರಾಮ ಪಂಚಾಯತ್ ಅಧ್ಯಕ್ಷರು,ಪಿಡಿಓ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.