ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅಕ್ಕಪಕ್ಕ ಕುಳಿತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ನಡುವಿನ ಮಾತುಕತೆ ಸಾರ್ವಜನಿಕರಲ್ಲಿ ಚರ್ಚೆಗೆ ಆಸ್ಪದ ನೀಡಿದೆ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಕೇಂದ್ರ ಸಚಿವರುಗಳ ಭೇಟಿಗೆ ತೆರಳುವ ಮುನ್ನ ಈ ಇಬ್ಬರು ಮುಖಂಡರ ನಡುವೆ 15 ನಿಮಿಷಗಳಿಗೂ ಹೆಚ್ಚು ಕಾಲ ನಡೆದಿರುವ ಮಾತುಕತೆ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದು, ಮುಂದೆ ಹಲವಾರು ಬೆಳವಣಿಗೆಗಳು ಆಗಬಹುದೇ ಎಂಬ ಪ್ರಶ್ನೆಗಳನ್ನು ಸಾರ್ವಜನಿಕರಲ್ಲಿ ಮೂಡಿಸಿದೆ.