ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಮೂರನೇ ಮಹಡಿ ಮೇಲಿಂದ ಜಿಗಿದು ರೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಆದರ್ಶ್ ಗುನ್ಕೋಲಿ ಎಂಬ ರೋಗಿ ಜ್ವರದ ಹಿನ್ನಲೆ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕೆತ್ಸೆ ಪಡೆಯುತ್ತಿದ್ದ. ಮೂರನೇ ಮಹಡಿಯ ಕಿಡಕಿ ಮೂಲಕ ಜಿಗಿದು ಬಿದ್ದಿದ್ದ. ಯುವಕನನ್ನು ನಂತರ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕೆತ್ಸೆ ನೀಡಿದರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಕುರಿತು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.