ಸಂಬಂಧಿಕರ ನಡುವಿನ ಗಲಾಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದಾಗ ಪಿ.ಎಸ್.ಐ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆ ಮನನೊಂದು ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿತ್ತು.

ಗೋಕಾಕ ಆದಿಜಾಂಬವ ನಗರದ ವಿಶಾಲ ಪ್ರಕಾಶ ಮೇಸ್ತ್ರಿ ಮತ್ತು ಸಂಬಂಧಿಕರ ನಡುವೆ ಗಲಾಟೆ ನಡೆದಿತ್ತು. ನಮ್ಮ ಸಮಸ್ಯೆ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಕ್ಕೆ ಪಿಎಸ್ಐ ಕೆ. ವಾಲಿಕಾರ್ ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೇ ರಾತ್ರಿಯ ವೇಳೆ ಪಿಎಸ್ಐ ಸಿಬ್ಬಂದಿಯೊಂದಿಗೆ ವಿಶಾಲ ಮನೆಗೆ ತೆರಳಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಆರೋಪಿಸಲಾಗಿದೆ. ಇದರಿಂದ ಮನನೊಂದು ಗೋಕಾಕ ಬಸವೇಶ್ವರ ವೃತ್ತದಲ್ಲಿ ವಿಶಾಲ್ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ವಿಶಾಲ ಮನೆಗೆ ರಾತ್ರಿ ವೇಳೆ ಪೊಲೀಸರು ಭೇಟಿ ನೀಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.