Belagavi

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರಿ…

Share

 

ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ತಡೆಯಬೇಕು. ಪಶ್ಚಿಮ ಬಂಗಾಳ ಸರ್ಕಾರಕ್ಕೆ ಒಂದು ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗಲಿಲ್ಲವೆಂದರೇ, ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಆಗ್ರಹಿಸಿದ ವಿಶ್ವ ಹಿಂದೂ ಪರಿಷತ್ತು ಮತ್ತು ಬಜರಂಗ ದಳದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಬೆಳಗಾವಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಇಂದು ವಿಶ್ವ ಹಿಂದೂ ಪರಿಷತ್ತು ಮತ್ತು ಬಜರಂಗ ದಳದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಹಿಂದೂಗಳ ದೇಶವಾದ ಭಾರತದಲ್ಲಿ ಹಿಂದೂಗಳ ಮೇಲೆಯೇ ಇತ್ತಿಚೆಗೆ ಅನ್ಯಾಯ ಅತ್ಯಾಚಾರಗಳು ಹೆಚ್ಚಾಗಿವೆ. ಇದಕ್ಕೆ ತಾಜಾ ಉದಾಹರಣೆಯೆಂದರೇ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಘಟನೆಗಳು. ಇಲ್ಲಿನ ಘಟನೆಗಳು ಪಶ್ಚಿಮ ಬಂಗಾಳ ಭಾರತದಲ್ಲಿದೆಯೋ ಅಥವಾ ಬೇರೆ ರಾಷ್ಟ್ರದಲ್ಲಿದೆಯೋ ಎಂಬ ಪ್ರಶ್ನೆ ಮೂಡುತ್ತಿದೆ. ಹಿಂದೂ ಮಹಿಳೆಯರ ಮೇಲೆ ಅನ್ಯಾಯ ಅತ್ಯಾಚಾರವೆಸಗಿ ಓಡಿ ಹೋಗುವಂತೆ ಮಾಡಲಾಗುತ್ತಿದೆ. ಅಲ್ಲಿರುವ ಹಿಂದೂಗಳಿಗೆ ಸಂರಕ್ಷಣೆಯನ್ನು ನೀಡಬೇಕು. ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿ, ಪಶ್ಚಿಮ ಬಂಗಾಳ ಸರ್ಕಾರಕ್ಕೆ ಒಂದು ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗಲಿಲ್ಲವೆಂದರೇ, ರಾಷ್ಟ್ರಪತಿ ಆಡಳಿತ ಹೇರಬೇಕೆಂದು ವಿಶ್ವ ಹಿಂದೂ ಪರಿಷತ್ತಿನ ವಿಜಯ ಜಾಧವ್ ಆಗ್ರಹಿಸಿದರು.

ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಲಾಯಿತು. ಆನಂದ ಕರಲಿಂಗಣ್ಣನವರ, ಸಂತೋಷ ಮಾದಿಗರ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಭಾಗಿಯಾಗಿದ್ಧರು.

Tags:

error: Content is protected !!