ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಕ್ಕೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದಲ್ಲಿ ನಡೆದಿದೆ

ಜಮಖಂಡಿ ನಗರದಲ್ಲಿ ಏ.20 ರಂದು ಅಭಿಲಾಷ ಲಗಳೆ ಎಂಬ ಯುವಕ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದ ಜಮಖಂಡಿ ಸರ್ಕಾರಿ ಆಸ್ಪತ್ರೆಯಲ್ಲಿ ಆಪ್ತ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ಯುವತಿ ತೇಜಸ್ವಿನಿ ಬಿರಾದಾರ ಹಾಗೂ ಅಭಿಲಾಶ್ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು ಆಕೆ ನಮ್ಮ ಮಗನನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಕ್ಕೆ ನಮ್ಮ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೋಷಕರು ಆರೋಪಿಸಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಮಾಡಿರುವ ಸಾಕ್ಷಿಗಳಿವೆ ಅದರಲ್ಲಿ ಮದುವೆಯಾಗಲು ಯುವಕ ಒತ್ತಾಯಿಸಿದ್ದು, ನಿರಾಕರಿಸಿರುವ ಯುವತಿಯ ಮೆಸೇಜ್ ವೈರಲ್ ಆಗಿದೆ.
ನಮಗೆ ನ್ಯಾಯ ಕೊಡಿಸಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು ಮೃತ ಯುವಕನ ಪೋಷಕರು ಒತ್ತಾಯಿಸಿದ್ದಾರೆ. ದಲಿತ ಸಂಘಟನೆಗಳಿಂದಲೂ ಯುವತಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.