Banglore

ಇಂದಿನಿಂದ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಜಾರಿ…

Share

‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಇಂದಿನಿಂದ ಜಾರಿಯಾಗಿದ್ದು, ಬಿಬಿಎಂಪಿ ಬದಲು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಮಹಾನಗರ ಪಾಲಿಕೆಗಳ ರಚನೆಯಾಗುವ ಸಾಧ್ಯತೆಯಿದೆ’ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಇಂದು ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಇನ್ಮುಂದೆ ಬೆಂಗಳೂರು ‘ಗ್ರೇಟರ್ ಬೆಂಗಳೂರು” ಆಗಲಿದೆ. ರಾಜ್ಯದ ಮುಖ್ಯಮಂತ್ರಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಇನ್ನು ‘ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿದೆ. ಈ ಅನಾಹುತಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು’ ಎಂದರು.

Tags:

error: Content is protected !!