Khanapur

ಅವೈಜ್ಞಾನಿಕ ಸ್ಪೀಡ್ ಬ್ರೇಕರ್’ನಲ್ಲಿ ಬೈಕ್ ಸ್ಕೀಡ್; ಯುವಕ ಸಾವು

Share

ಖಾನಾಪೂರ: ಖಾನಾಪೂರ ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಝಂಜವಾಡ ಗ್ರಾಮದ ಬಳಿ ಇದ್ದ ಅಪಾಯಕಾರಿ ಸ್ಪೀಡ್ ಬ್ರೇಕರ್’ನಲ್ಲಿ ಬೈಕ್ ಸ್ಕಿಡ್ ಆಗಿ ಧಾರವಾಡ ತಾಲೂಕಿನ ಕೋಟೂರ ಗ್ರಾಮದ 25 ವರ್ಷದ ಆಯುಬ್ ಅಕ್ಬರ್ ನಾಯಿಕ್ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ನಂದಗಡ ಪೊಲೀಸ್ ಠಾಣೆಯ ಪಿಎಸ್ಐ ಬಾದಾಮಿ, ಹವಾಲ್ದಾರ್ ಪಾಂಡು ತುರಮರಿ ಮತ್ತು ನಾಗರಾಜ್ ಬೆಳವಡಿ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದಿಂದ ಆಂಬುಲೆನ್ಸ್ ಮೂಲಕ ಪ್ರಥಮ ಚಿಕಿತ್ಸೆ ನೀಡಲು ಯತ್ನಿಸಿದರೂ ಯುವಕ ಮೃತಪಟ್ಟಿರುವುದು ದೃಢಪಟ್ಟಿದೆ.

ಈ ಭಾಗದಲ್ಲಿ ದ್ವಿಚಕ್ರ ವಾಹನ ಸವಾರರು ನಿರಂತರವಾಗಿ ಅಪಘಾತಕ್ಕೆ ಒಳಗಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ.
ಅವೈಜ್ಞಾನಿಕ ಸ್ಪೀಡ್ ಬ್ರೇಕರ್ ನಿರ್ಮಿಸಿರುವ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tags:

error: Content is protected !!