ಸವದತ್ತಿ ಪಟ್ಟಣದ ಎಪಿಎಂಸಿಯಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಶಂಕೆ ವ್ಯಕ್ತವಾಗಿದ್ದು, ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿಯಲ್ಲಿ ವ್ಯಕ್ತಿಯೋರ್ವನನಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಕ್ತದ ಮಡುವಿನಲ್ಲಿ ವ್ಯಕ್ತಿಯ ಶವ ಬಿದ್ದಿದೆ. ಪಕ್ಕದಲ್ಲೇ ಇಟ್ಟಿಗೆ ಮತ್ತು ಕಲ್ಲುಗಳು ಪತ್ತೆಯಾಗಿವೆ. ಸ್ಥಳಕ್ಕೆ ಸವದತ್ತಿ ಸಿಪಿಐ ಧರ್ಮಕರ ಧರ್ಮಟ್ಟಿ, ಪಿಎಸ್ಐ ಕೆ. ಎಮ್. ಬನ್ನೂರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.