ಕಾಗವಾಡ: ತಾಲೂಕು ಉಗಾರ ಪಟ್ಟಣದ ಸೆಂಟ್ರಲ್ ಬ್ಯಾಂಕ್ ಗೆ ಕೇವಲ ಮೂರು ದಿನಗಳ ಹಿಂದಷ್ಟೇ ಅಸಿಸ್ಟಂಟ್ ಮ್ಯಾನೇಜರ್ ಆಗಿ ಸೇವೆಗೆ ಹಾಜರಾಗಿದ್ದ ಆಂಧ್ರಪ್ರದೇಶ ಮೂಲದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇವಲ ಮೂರು ದಿನಗಳ ಹಿಂದಷ್ಟೇ ಆಂಧ್ರಪ್ರದೇಶ ಮೂಲದ ರವಿಕುಮಾರ್ ಉಗಾರ ಸೆಂಟ್ರಲ್ ಬ್ಯಾಂಕ್ ಮ್ಯಾನೇಜರ್ ಆಗಿ ಅಧಿಕಾರ ವಹಿಸಿಕೊಂಡಿದ್ದ ಅವರು ನ್ಯಾಯವಾದಿ ಭರಮದೆ ಇವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ಇಂದು ಮುಂಜಾನೆ ಸಮಯವಾದರೂ ಏಳದ್ದರಿಂದ ಸಂಶಯಗೊಂಡ ಬ್ಯಾಂಕ್ ಅಧಿಕಾರಿಗಳು ತಕ್ಷಣ ಕಾಗವಾಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಕಾಗವಾಡ ಪಿಎಸ್ಐ ಗಂಗಾ ಬಿರಾದಾರ ಆಗಮಿಸಿ ಎಲ್ಲ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಶವವನ್ನು ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಈ ಕುರಿತು ಸೆಂಟ್ರಲ್ ಬ್ಯಾಂಕ್ ಮ್ಯಾನೇಜರ ಚಂದುದೇವ ಕಾಗವಾಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ