Chikkodi

ನಿಪ್ಪಾಣಿ ಪ್ರಜಾಸೌಧಕ್ಕೆ 8 ಕೋಟಿ 60 ಲಕ್ಷ ರೂಪಾಯಿ ಅನುದಾನ ಮಂಜೂರು:ಶಾಸಕಿ ಶಶಿಕಲಾ ಜೊಲ್ಲೆ

Share

ನಿಪ್ಪಾಣಿ ನಗರದಲ್ಲಿ ಕ್ಷೇತ್ರದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾರ್ವಜನಿಕರಿಗೆ ಒಂದೇ ಸೂರಿನ ಅಡಿಯಲ್ಲಿ ಎಲ್ಲ ಸರ್ಕಾರಿ ಸೇವೆಗಳನ್ನು ಒದಗಿಸುವಂತ ನಿಟ್ಟಿನಲ್ಲಿ ಸುಸಜ್ಜಿತ ಪ್ರಜಾಸೌಧ ನೂತನ ಕಟ್ಟಡಕ್ಕೆ 8 ಕೋಟಿ 60 ಲಕ್ಷ ರೂಪಾಯಿ ಅನುದಾನ ಮಂಜೂರು ಬಿಡುಗಡೆಯಾಗಿದ್ದು ಶೀಘ್ರದಲ್ಲಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಗುವುದು.ಈ ಪ್ರಜಾಸೌಧವು ಹೈ ಟೆಕ್ ಕಟ್ಟಡ TYPE -A ವಿನ್ಯಾಸದಲ್ಲಿ ನಿರ್ಮಾಣವಾಗುವುದು.ಕೃಷಿ ಉತ್ಪನ್ನ ಮಾರುಕಟ್ಟೆಯ 2 ಎಕರೆ ಜಾಗದಲ್ಲಿ ಪ್ರಜಾಸೌಧಕ್ಕೆ ಜಾಗ ನೀಡಿದ್ದು ಅಲ್ಲಿ ಪ್ರಜಾಸೌಧ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು.

2021-22ನೇ ಸಾಲಿನಲ್ಲಿ ನಾನು ಸಚಿವೆಯಾದ ಸಂದರ್ಭದಲ್ಲಿ ಸಹಕಾರ ಸಚಿವರಿಗೆ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ಜಮೀನು ಮಂಜೂರು ಮಾಡುವಂತೆ ಮಾಡುವಂತೆ ಮನವಿ ನೀಡಲಾಗಿದ್ದು ನಮ್ಮ ಮನವಿಗೆ ಸ್ಪಂದಿಸಿ ಜಾಗ ಮಂಜೂರಾಗಿದ್ದು ತದನಂತರ ಕಂದಾಯ ಇಲಾಖೆಗೆ 2 ಎಕರೆ ಜಾಗವನ್ನು ಹಸ್ತಾಂತರಿಸಲಾಗಿದೆ.ಈಗಿನ ಕಾಂಗ್ರೆಸ್ ಸರಕಾರದಲ್ಲಿ ಹಲವು ಬಾರಿ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿ,ಅಧಿವೇಶನದಲ್ಲಿ ಸಚಿವರ ಗಮನ ಸೆಳೆದು ಧ್ವನಿ ಎತ್ತಿ 8 ಕೋಟಿ 60 ಲಕ್ಷ ಅನುದಾನ ಮಂಜೂರು ಮಾಡಿಸಿರುತ್ತೇನೆ.ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

error: Content is protected !!