ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನದ ಮಾಹಿತಿ ಮಳಿಗೆಯನ್ನು ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಉದ್ಘಾಟಿದರು.
ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಕುಟುಂಬಗಳು ಪಂಚ ಗ್ಯಾರಂಟಿ ಲಾಭ ಪಡೆಯುತ್ತಿವೆ. ಇಂದಿನಿಂದ ಜೂನ್ 26 ಸಾಯಂಕಾಲ 8 ಘಂಟೆಯವರೆಗೂ ಪ್ರದರ್ಶನ ಲಭ್ಯವಿದ್ದು ಸಾರ್ವಜನಿಕರು ಲಾಭ ಪಡೆಯಬೇಕೆಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.