ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ನಿಪ್ಪಾಣಿ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರನ್ನು ಭೇಟಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದರು
ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ
ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸೋಮವಾರ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.