BELAGAVI

ಖಡಕ್’ ಗಲ್ಲಿಯಲ್ಲಿ ಬೋರವೇಲ್ ಕೊರೆಸುವ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ…

Share

ಬೆಳಗಾವಿ ನಗರದ ಖಡಕ್ ಗಲ್ಲಿಗೆ ಭೇಟಿ ನೀಡಿದ ಉತ್ತರ ಶಾಸಕ ಆಸೀಫ್ ಸೇಠ್ ಅವರು ಬೋರವೇಲ್ ಕೊರೆಯಿಸುವ ಕಾಮಗಾರಿಗೆ ಚಾಲನೆಯನ್ನು ನೀಡಿದರು.

ಇಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಹಾಗೂ ನಗರಸೇವಕ ಮುಝಮ್ಮಿಲ್ ಡೋಣಿ ಅವರು ಬೆಳಗಾವಿಯ ಖಡಕ್ ಗಲ್ಲಿಯಲ್ಲಿನ ನೀರಿನ ಸಮಸ್ಯೆಯನ್ನು ನೀಗಿಸಲು ಜನರ ಬೇಡಿಕೆಯಂತೆ ಬೋರವೆಲ್ ಕೊರೆಯಿಸುವ ಕಾಮಗಾರಿಗೆ ಚಾಲನೆಯನ್ನು ನೀಡಿದರು.

ನಂತರ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಮಾತನಾಡಿದ ಶಾಸಕ ಆಸೀಫ್ ಸೇಠ್ ಅವರು ಜನರ ಸಮಸ್ಯೆಗಳನ್ನು ಬಗೆಹರಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುವುದಾಗಿ ಸಕಾರಾತ್ಮಕ ಸ್ಪಂದನೆಯನ್ನು ನೀಡಿದರು.

Tags:

error: Content is protected !!