ಬೆಳಗಾವಿ ಜಿಲ್ಲೆ, ಸವದತ್ತಿ ತಾಲೂಕು ಹಾರುಗೊಪ್ಪ ಗ್ರಾಮದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು.
ಏಕಾಏಕಿ ಗುಡುಗು ಮಿಂಚು ಸಹಿತ ಆರಂಭವಾದ ಮಳೆ ಎರಡು ಗಂಟೆಗಳ ಕಾಲ ಧಾರಾಕಾರವಾಗಿ ಸುರಿಯಿತು. ಆರಂಭವಾದ ಸ್ವಲ್ಪ ಹೊತ್ತಿನಲ್ಲಿಯೇ ಮಳೆಯಿಂದಾಗಿ ರಸ್ತೆಗಳು, ಗದ್ದೆಗಳು ಕೆರೆಯಂತಾದವು ವಾಹನ ಸವಾರರು ತೀವ್ರ ಪರದಾಡಿದರು. ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು ಹೀಗಿದ್ದರೂ ಕೃಷಿ ಚಟುವಟಿಕೆಗಳಿಗೆ ಸಿದ್ಧಗೊಂಡಿರುವ ರೈತರ ಮುಖದಲ್ಲಿ ಮಂದಹಾಸ ಮೂಡಿದೆ
