ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಡಿ ಬಿಡುಗಡೆ ಮಾಡೋ ಮೂಲಕ ಡಿ.ಕೆ.ಶಿವಕುಮಾರ ಹಾಗೂ ವಿಜಯೇಂದ್ರ ರಮೇಶ ಜಾರಕಿಹೊಳಿ ಜೀವನ ಹಾಳು ಮಾಡಿದರು ಎಂದು ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ ಗಂಭೀರ ಆರೋಪ ಮಾಡಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿ ಬಿಜೆಪಿಗೆ ಬಿ ಎಸ್ ಯಡಿಯೂರಪ್ಪ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ, ತನ್ನ ಮಗನ ಅಧ್ಯಕ್ಷಗಾಗಿ ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪ ಕುಳಿತ್ತು ಕೊಳ್ಳುತ್ತಿದ್ದಾರೆ, ಬಿಜೆಪಿಗೆ ಒಳ್ಳೆಯದು ಆಗಬೇಕು ಅಂದ್ರೇ ವಿಜಯೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇನ್ನೂ ಈ ಸಲ ಮತ್ತೇ ಬೆಳಗಾವಿಯಲ್ಲಿ ಸಭೆ ಮಾಡುತ್ತೇವೆ, ಬಹಿರಂಗವಾಗಿ ಸಭೆ ಮಾಡುತ್ತೇವೆ ಎಂದು ಹೇಳಿದರು.