ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯೂ 1 ವರ್ಷ ಯಶಸ್ವಿಯಾಗಿ ಪೂರೈಸಿದ್ದು, 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಬೆಳೆಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್’ನ ವತಿಯಿಂದ ನಾರಿ ಶಕ್ತಿ ಸಂಭ್ರಮೋತ್ಸವವನ್ನು ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಆಸೀಫ್ ಸೇಠ್ ಅವರು ಶಕ್ತಿ ಯೋಜನೆಯಿಂದ ಸಂಪೂರ್ಣ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರವಾಸ ಬೆಳೆಸಿದ್ದಾರೆ. ಇದು ಜಗತ್ತಿನಲ್ಲೇ ಒಂದು ದಾಖಲೆಯಾಗಿದೆ. ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಸರ್ಕಾರದಿಂದ 12, 669 ಕೋಟಿ ಅನುದಾನವನ್ನು ಇದಕ್ಕಾಗಿ ನೀಡಲಾಗಿದೆ. 12, 669 ಕೋಟಿ ಹಣ ಮಹಿಳೆಯರಿಗೆ ಉಳಿತಾಯವಾಗಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದ್ದು, ಭವಿಷ್ಯದಲ್ಲಿಯೂ ಮುಂದುವರೆಯಲಿವೆ ಎಂದರು.
ಬೆಳಗಾವಿ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ್ ನಾವಲಗಟ್ಟಿಯವರು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜಾರಿಗೊಂಡ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆಯರಿಗೆ ಸಹಾಯಕವಾಗಿವೆ. ಅಲ್ಲದೇ ಸಾರಿಗೆ ಸಂಸ್ಥೆಗೂ ಹೆಚ್ಚಿನ ಲಾಭ ದೊರೆತಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಯೋಜನೆ ಯಶಸ್ವಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಜಿಲ್ಲಾ ನಿಯಂತ್ರಣಾಧಿಕಾರಿ ರಾಜೇಶ್ ಹುದ್ಧಾರ್, ಪ್ರದೀಪ್ ಎಂ.ಜೆ. ಮಲಗೌಡಾ ಪಾಟೀಲ್, ಬಿ.ಡಿ. ಗುರಿಕಾರ್, ಸಾಧಿಕ್ ಇನಾಂದಾರ್, ಆಯೇಷಾ ಸನದಿ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.