ವಿಜಯಪುರ ಜಿಲ್ಲೆಯ ನಿಡಗುಂಡಿ ತಾಲೂಕಿನ ವಂದಾಲ ಗ್ರಾಮದ ಬನಶಂಕರಿ ದೇಗುಲದಲ್ಲಿ ಒಂಟಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ್ದಾನೆ. ಜಾಕೇಟ್ ಧರಿಸಿ ಬಂದ ಕಳ್ಳ ದೇಗುಲದ ಗರ್ಭಗುಡಿಗೆ ನುಗ್ಗಿ ದೇವಿಯ ಮೂರ್ತಿಯ ಮೇಲಿದ್ದ ಬೆಳ್ಳಿ ಆಭರಣಗಳನ್ನ ಕಳ್ಳತನ ಮಾಡಿದ್ದಾರೆ. ದೇವಿಯ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕದ್ದುಕೊಂಡು ಹೋಗಿದ್ದಾನೆ. ಇದರ ಮೌಲ್ಯ ಸರಿಸುಮಾರು ೨ ಲಕ್ಷ ರೂಪಾಯಿಗಳು ಎನ್ನಲಾಗಿದೆ. ಖದೀಮನ ಕಳ್ಳತನದ ದೃಶ್ಯಗಳು ದೇಗುಲದಲ್ಲಿ ಅಳವಡಿಸಿರೋ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿವೆ. ಈ ಸಂಬಂಧ ದೇಗುಲ ಕಮೀಟಿಯವರು ನಿಡಗುಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಳ್ಳನ ಪತ್ತೆಗೆ ಆಗ್ರಹಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಕಳ್ಳರ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ..