ಹುಬ್ಬಳ್ಳಿಯಲ್ಲಿ ಓರ್ವನ ಅನಾಮದೇಯ ವ್ಯಕ್ತಿ ಶವ ಚರಂಡಿ ಮೋರಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ವಾಣಿ ವಿಲಾಸ್ ಚರಂಡಿ ಮೋರಿಯಲ್ಲಿ ಅನಾಮದೇಯ ವ್ಯಕ್ತಿಯ ಶವ ಪತ್ತೆಯಾಗಿದ್ದು. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ. ಶವವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ ಆಗಿಲ್ಲ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.