ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮಾರ್ಗದರ್ಶನದಲ್ಲಿ ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಅಲ್ಪಸಂಖ್ಯಾತರ ನಿಧಿಯಿಂದ ₹19 ಲಕ್ಷ ವೆಚ್ಚದ ಸಿಮೆಂಟ್ ರಸ್ತೆಯ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು
ಕಳೆದ ಏಳು ವರ್ಷಗಳಿಂದ ಈ ಪ್ರದೇಶದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಆಮದಾರ್ ಲಕ್ಷ್ಮಿ ಹೆಬ್ಬಾಳಕರ ಅವರ ಪ್ರಯತ್ನಗಳಿಂದ ಈ ಎಲ್ಲಾ ಕಾಮಗಾರಿಗಳು ಪೂರ್ಣವಾಗುತ್ತಿವೆ ಎಂದು ಸ್ಥಳೀಯ ನಾಗರಿಕರು ತಿಳಿಸಿದ್ದಾರೆ. ಈ ಅಭಿವೃದ್ಧಿ ಕಾರ್ಯಗಳಿಗೆ ಸ್ಥಳೀಯರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸದ್ದಾಂ ಮುಲ್ಲಾ, ಕಲೀಂ ಜಮಾದಾರ, ಇಮಾಮ್ ಮುಲ್ಲಾ, ರಾಜೇಶ್ ರೇವಣಕರ, ಮಲ್ಲಿಕಜಾನ್ ಖಾದ್ರಿ, ಫಯಾಜ್ ಮುಲ್ಲಾ, ಸಮೀರ್ ಕಿಲ್ಲೇದಾರ, ಜುಬೇರ್ ಸರಕಾವಾ, ಉಬೇದ್ ಶಿಲೆದಾರ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.