ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯನ್ನ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಅವರು ವಿತರಣೆ ಮಾಡಿದರು.
ಹುಬ್ಬಳ್ಳಿಯಬೆಂಗೇರಿಯ ಸಂತೆ ಮೈದಾನದಲ್ಲಿಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ, ಧಾರವಾಡ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಾಡಿತ್ತು. ಡಿಸಿ ದಿವ್ಯ ಪ್ರಭು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.