ವರ್ಷದಿಂದ ಜಾರಿಯಾಗದ ವಿದ್ಯಾರ್ಥಿವೇತನವನ್ನು ಜಾರಿಗೊಳಿಸಬೇಕು ಮತ್ತು ಹಾಸ್ಟೆಲಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಖಾನಾಪುರದಲ್ಲಿ ಎಬಿವಿಪಿಯ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಖಾನಾಪುರ ತಾಲೂಕಾ ಆಡಳಿತ ಸೌಧದ ಎದುರು ಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಈ ವೇಳೆ ಮಾತನಾಡಿದ ಸಚಿನ್ ಕುಲಗೇರಿ ಅವರು ರಾಜ್ಯ ಸರಕಾರ ಮಲತಾಯಿ ಧೋರಣೆಯನ್ನು ತೋರುತ್ತಿದೆ. ಹಿಂದುಳಿದ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ. ಊಟದ ವೆಚ್ಚ ಕೇವಲ ೧೮೭೦ ರೂಪಾಯಿ ನೀಡಲಾಗುತ್ತಿದ್ದು, ಪೌಷ್ಠಿಕ ಆಹಾರ ದೊರೆಯುತ್ತಿಲ್ಲ. ಹಾಸ್ಟೆಲಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಅದೇ ರೀತಿ ಕಳೆದ ಒಂದು ವರ್ಷದಿಂದ ಜಾರಿಯಾಗದ ವಿದ್ಯಾರ್ಥಿ ವೇತನವನ್ನು ಕೂಡಲೇ ಜಾರಿಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿದ್ದರು.