ಚಿಕ್ಕೋಡಿ: ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಹಾಗೂ ಗಡಿಭಾಗದ ಚಿಕ್ಕೋಡಿ-ನಿಪ್ಪಾಣಿ ತಾಲೂಕಿನಲ್ಲಿ ಮಳೆಯ ಪ್ರಮಾಣ ಕಳೆದ 5 ದಿನಗಳಿಂದ ಕಡಿಮೆಯಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನ ಮಟ್ಟ ಇಳಿಕೆಯಾಗಿದ್ದು ಕೆಳಹಂತದ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ಇಂದು ಕೃಷ್ಣಾ ನದಿಯ ಕಲ್ಲೋಳ-ಯಡೂರ ಮತ್ತು ಮಾಂಜರಿ-ಸವದತ್ತಿ ಬ್ಯಾರೇಜಗಳು ಸಂಚಾರಕ್ಕೆ ಮುಕ್ತಗೊಂಡಿದೆ.
ಮಹಾರಾಷ್ಟ್ರದ ರಾಜಾಪುರ ಬ್ಯಾರೇರನಿಂದ ಮುಖಾಂತರ 43,500 ಕ್ಯೂಸೆಕ್ ಹೀಗೆ ಒಟ್ಟು 51,948 ಕ್ಯೂಸೆಕ್ ನೀರು ರಾಜ್ಯಕ್ಕೆ ಹರಿದು ಬರುತ್ತಿದ್ದು, ನಿನ್ನೆಗಿಂತ ಇವತ್ತು ನೀರು ಕಡಿಮೆ ಹರಿದು ಬರುತ್ತಿದ್ದರಿಂದ ನದಿಗಳ ನೀರಿನ ಮಟ್ಟದಲ್ಲಿ ಇಳಿಕೆಯಾಗಿದೆ.
ವೇದಗಂಗಾ ನದಿಯ ಜತ್ರಾಟ-ಭಿವಸಿ, ಭೋಜವಾಡಿ ಅಕ್ಕೋಳ,ಸಿದ್ನಾಳ -ಶಿವಾಪುರವಾಡಿ ಮತ್ತು ಕುನ್ನೂರ-ಬಾರವಾಡ, ದೂಧಗಂಗಾ ನದಿಯ ಕಾರದಗಾ-ಭೋಜ ಮತ್ತು ಮಲಿಕವಾಡ-ದತ್ತವಾಡ ಬ್ಯಾರೇಜಗಳು ಹಾಗೂ ಕೃಷ್ಣಾ ನದಿಯ ದಿಯ ಕಲ್ಲೋಳ-ಯಡೂರ ಮತ್ತು ಮಾಂಜರಿ-ಸವದತ್ತಿ ಬ್ಯಾರೇಜಗಳು ಹೀಗೆ ಒಟ್ಟು 8 ಬ್ಯಾರೇಜಗಳು ಸಂಚಾರಕ್ಕೆ ಮುಕ್ತವಾಗಿವೆ.